ಮೊದಲ ದಿನವೇ ವಿಶೇಷ ಅಲಂಕಾರ, ದರ್ಶನಕ್ಕೆ ಹರಿದು ಬಂದ ಭಕ್ತಸಾಗರ
ಧಾರವಾಡ
ನಾಡಿನಾದ್ಯಂತ ನವರಾತ್ರಿ ಉತ್ಸವದ ಸಂಭ್ರಮ ಮನೆಮಾಡಿದ್ದು, ಧಾರವಾಡದ ದುರ್ಗಾದೇವಿ ದೇವಸ್ಥಾನದಲ್ಲಿಯೂ ಶರನ್ನವರಾತ್ರಿಯ ಮೊದಲ ದಿನ ಭಕ್ತಿಭಾವದಿಂದ ಆಚರಿಸಲಾಯಿತು.
ದೇವಿಗೆ ಮೊದಲ ದಿನ ಗೆಜ್ಜೆ ವಿಶೇಷ ಅಲಂಕಾರ ಮಾಡಲಾಗಿದ್ದು, ದೇವಿಯ ದರ್ಶನ ಪಡೆಯಲು ಬೆಳಗ್ಗಿನಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದರು.
ನವರಾತ್ರಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಿಯ ಅಲಂಕಾರ ಭಕ್ತರ ಗಮನ ಸೆಳೆಯಿತು. ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ದುರ್ಗಾದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ತಮ್ಮ ಕುಟುಂಬದ ಸುಖ, ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಿದರು.
ನವರಾತ್ರಿಯ ಮೊದಲ ದಿನವೇ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ದೇವಸ್ಥಾನದ ಆವರಣದಲ್ಲಿ ಧಾರ್ಮಿಕ ವಾತಾವರಣ ಮನೆಮಾಡಿತ್ತು. ದೇವಿಯ ದರ್ಶನಕ್ಕಾಗಿ ಆಗಮಿಸಿದ ಭಕ್ತರಲ್ಲಿ ಹಬ್ಬದ ಸಂಭ್ರಮ ಮತ್ತು ಭಕ್ತಿಯ ಭಾವ ಎದ್ದು ಕಾಣುತ್ತಿತ್ತು.
ನವರಾತ್ರಿ ಉತ್ಸವದ ಅಂಗವಾಗಿ ಒಂಬತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ದುರ್ಗಾದೇವಿಯ ಆರಾಧನೆಯೊಂದಿಗೆ ಭಕ್ತರು ನವರಾತ್ರಿ ಹಬ್ಬವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸುತ್ತಿದ್ದಾರೆ.
ಧಾರವಾಡ ದುರ್ಗಾದೇವಿಯ ಇಂದಿನ ಅಲಂಕಾರ ನೋಡಲು ಈ ಕೆಳಗಿನ ವಿಡಿಯೋ ನೋಡಿ…
