ಧಾರವಾಡ ಜನತಾ ಶಿಕ್ಷಣ ಸಮಿತಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದಿಂದ ಶುಭಾಶಯ
ಧಾರವಾಡ
ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ಮಹೋತ್ಸವದ ಶುಭ ಸಂದರ್ಭದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್, ಆಡಳಿತಾಧಿಕಾರಿ ಅರಿಹಂತ್ ಪ್ರಸಾದ್ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಪೂಜ್ಯರನ್ನು ಭೇಟಿಯಾಗಿ ಶುಭಾಶಯಗಳನ್ನು ಸಲ್ಲಿಸಿ ಆಶೀರ್ವಾದ ಪಡೆದರು.
ಧರ್ಮಸ್ಥಳದ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರು ಸಲ್ಲಿಸುತ್ತಿರುವ ಸೇವೆ ಅಪಾರವಾದುದು. ಶಿಕ್ಷಣ, ಆರೋಗ್ಯ, ಗ್ರಾಮೀಣ ಅಭಿವೃದ್ಧಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಲಕ್ಷಾಂತರ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಅವರು ಮಹತ್ವದ ಕೊಡುಗೆ ನೀಡಿದ್ದಾರೆ.
ಅವರ ಮಾರ್ಗದರ್ಶನ ಹಾಗೂ ಸಮಾಜಸೇವೆಯ ಆದರ್ಶಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಿವೆ. 59ನೇ ಪಟ್ಟಾಭಿಷೇಕ ಮಹೋತ್ಸವದ ಈ ಮಂಗಳಕರ ಸಂದರ್ಭದಲ್ಲಿ ಪೂಜ್ಯರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ನಿರಂತರ ಸಮಾಜಸೇವೆಗೆ ಶಕ್ತಿ ದೊರೆಯಲಿ ಎಂದು ಜನತಾ ಶಿಕ್ಷಣ ಸಮಿತಿಯ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾರೈಸಿದರು.
ಐಟಿಐ ಕಾಲೇಜ ಪ್ರಾಚಾರ್ಯ ಮಹಾವೀರ ಉಪಾಧ್ಯ, ಸುರಜ್ ಜೈನ್, ಡಾ. ಅರುಣಕುಮಾರ ಶಿರಹಟ್ಟಿ, ಡಾ. ಜೀನಪ್ಪ ಕುಂದಗೋಳ, ಡಾ. ಬಿ.ಎನ್. ಬಾವಿ ಸೇರಿದಂತೆ ಅನೇಕ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಇದ್ದರು.

