ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತಿ ಹಾಗೂ ಜನ್ಮದಿನದ ಅಂಗವಾಗಿ ಸ್ಪರ್ಧೆ
ಧಾರವಾಡ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತಿ ಹಾಗೂ ಜನ್ಮದಿನದ ಅಂಗವಾಗಿ ಧಾರವಾಡ ನಗರದ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.
ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ), ವಿದ್ಯಾಗಿರಿ ವತಿಯಿಂದ ಈ ಸ್ಪರ್ಧೆ ಏರ್ಪಡಿಸಲಾಗಿದೆ. ‘ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶೈಕ್ಷಣಿಕ ಹಾಗೂ ಸಾಮಾಜಿಕ ಕೊಡುಗೆಗಳು’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳು ಪ್ರಬಂಧ ಬರೆಯಬೇಕಿದೆ.
ಸ್ಪರ್ಧೆಯು ನವೆಂಬರ್ 7ರಂದು ಬೆಳಿಗ್ಗೆ 10.30ಕ್ಕೆ ವಿದ್ಯಾಗಿರಿಯ ಜೆ.ಎಸ್.ಎಸ್. ಐ.ಟಿ.ಐನಲ್ಲಿ ನಡೆಯಲಿದೆ. ಅರ್ಹ ಪ್ರಬಂಧಗಳಿಗೆ ಬಹುಮಾನ ಹಾಗೂ ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ವಿದ್ಯಾರ್ಥಿಗಳು ನವೆಂಬರ್ 5ರೊಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 0836-2462202, 8660361703 ಹಾಗೂ 9738564415 ಸಂಪರ್ಕಿಸಬಹುದು ಎಂದು ಐಟಿಐ ಕಾಲೇಜ ಪ್ರಾಚಾರ್ಯ ಮಹಾವೀರ ಉಪಾಧ್ಯ ತಿಳಿಸಿದ್ದಾರೆ.
