ಧರ್ಮಸ್ಥಳ ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ಅಮರಶೆಟ್ಟಿ

ಹಂಚಿಕೊಳ್ಳಿ

ಧಾರವಾಡ
ಸಮೀಪದ ರಾಯಪುರದಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ಕಚೇರಿಯಲ್ಲಿ ಗುರುವಾರ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ ಜರುಗಿತು.

ಪ್ರಾದೇಶಿಕ ನಿರ್ದೇಶಕಿ ದಯಾಶೀಲ ಮಾತನಾಡಿ, ಪ್ರಾದೇಶಿಕ ಕಚೇರಿ ವ್ಯಾಪ್ತಿಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಅತ್ಯುತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಕ್ರಿಯಾಶೀಲ ಮತ್ತು ಯಶಸ್ವಿ ಕಾರ್ಯವೈಖರಿ ಮೂಲಕ ಕೇಂದ್ರ ಕಚೇರಿ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಪದಾಧಿಕಾರಿಗಳ ಸಹಕಾರ ಪ್ರೋತ್ಸಾಹ ಸಕಾಲದಲ್ಲಿ ಸಿಗುತ್ತಿರುವುದರಿಂದ ಕ್ಷೇತ್ರದ ಎಲ್ಲ
ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ ಎಂದರು‌.

ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸವಿತಾ ಅಮರಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ
ದೇಮನಿ ಸಿರೋಜಿ ಅವರನ್ನು ಅಯ್ಕೆ ಮಾಡಲಾಯಿತು.

ಬಳಿಕ ಮಾತನಾಡಿದ ಸವಿತಾ ಅಮರಶೆಟ್ಟಿ, ಮುಂಬರುವ ದಿನಗಳಲ್ಲಿ ವೇದಿಕೆಯ ಕಾರ್ಯ ಚಟುವಟಿಕೆಗಳಿಗೆ ಸದಸ್ಯರ ಮತ್ತು ಅಧಿಕಾರಿಗಳ ಸಲಹೆ ಮತ್ತು ಸಹಕಾರ ಮಹತ್ವದ್ದು ಎಂದರು.

ಅಧ್ಯಕ್ಷತೆ ವಹಿಸಿದ್ದ ವೇದಿಕೆ ಆಧ್ಯಕ್ಷ ವಸಂತ ಅರ್ಕಾಚಾರ ಮಾತನಾಡಿ, ತಮಗೆ ದೊರೆತ ಎರಡು ವರ್ಷದಲ್ಲಿ ಉತ್ತಮ ರೀತಿ ಕೆಲಸ ನಿರ್ವಹಿಸಲು ಅವಕಾಶ ಮತ್ತು ಸಹಕಾರ ನೀಡಿದ ಸದಸ್ಯರು ಮತ್ತು ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ವೇದಿಕೆಯ ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲಾ ನಿರ್ದೇಶಕ ಹನಮಂತ ನಾಯ್ಕ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಜನಾಧಿಕಾರಿ ಸೋಮನಿಂಗ ನಿರೂಪಿಸಿದರು. ಯೋಜನಾಧಿಕಾರಿ ಭಾಸ್ಕರ್ ವಂದಿಸಿದರು.


ಹಂಚಿಕೊಳ್ಳಿ

Leave a Reply

Your email address will not be published. Required fields are marked *