ಬಾಸ್ಕೆಟ್‌ಬಾಲ್ ಟೂರ್ನಿಯಲ್ಲಿ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಗೆ ಪ್ರಥಮ ಸ್ಥಾನ

ಹಂಚಿಕೊಳ್ಳಿ

ಧಾರವಾಡ
ಹುಬ್ಬಳ್ಳಿಯ ಚೇತನ್ ಪಬ್ಲಿಕ್ ಶಾಲೆಯಲ್ಲಿ ಅ. 30ರಂದು ನಡೆದ ಎಚ್.ಡಿ.ಎನ್.ಕೆ.ಎಸ್. ಬಾಸ್ಕೆಟ್‌ಬಾಲ್ ಟೂರ್ನಿಯಲ್ಲಿ ಧಾರವಾಡದ ವಿದ್ಯಾಗಿರಿಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದೆ.

ಟೂರ್ನಿಯಲ್ಲಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಕವಟೇಕರ ಅವರು ಮೋಸ್ಟ್ ವ್ಯಾಲ್ಯುಯಬಲ್ ಪ್ಲೇಯರ್ ಪ್ರಶಸ್ತಿ ಪಡೆದರೆ, ಕುಮಾರಿ ಶಮಿಕಾ ಮಹೀಂದ್ರಕರ ಅವರು ಬೆಸ್ಟ್ ಶೂಟರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಜೆಎಸ್‌ಎಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್, ಆಡಳಿತಾಧಿಕಾರಿ ಅರಿಹಂತ ಪ್ರಸಾದ್, ಜೆಎಸ್‌ಎಸ್ ಐಟಿಐ ಕಾಲೇಜಿನ ಪ್ರಾಂಶುಪಾಲ ಮಹಾವೀರ ಉಪಾಧ್ಯೆ, ಜೆಎಸ್‌ಎಸ್ ಎಂಸಿಎ ಕಾಲೇಜಿನ ನಿರ್ದೇಶಕ ಡಾ. ಸೂರಜ್ ಜೈನ್ ಹಾಗೂ ಶಾಲೆಯ ಪ್ರಾಂಶುಪಾಲರಾದ ರಜನಿ ಪಾಟೀಲ ಅವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.


ಹಂಚಿಕೊಳ್ಳಿ

Leave a Reply

Your email address will not be published. Required fields are marked *