ಐಐಟಿ-ಜಾಮ್ ಪರೀಕ್ಷೆ: ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

ಹಂಚಿಕೊಳ್ಳಿ

ಧಾರವಾಡ
ಜೆಎಸ್ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ್ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಐಐಟಿ-ಜಾಮ್ ಪರೀಕ್ಷೆಗೆ ಅಭ್ಯಾಸ ಮಾಡುವ ವಿಧಾನ ಕುರಿತು ಮಾರ್ಗದರ್ಶನ ಹಾಗೂ ಬಿ.ಎಸ್‌ಸಿ. ಪ್ರಥಮ ವರ್ಷದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕರ್ನಾಟಕ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ರಮೇಶ್ ಒಡವಿಯವರು ‘ಹೌ ಟು ಕ್ರ್ಯಾಕ್ ಐಐಟಿ-ಜಾಮ್’ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಉದಾಹರಣೆಗಳ ಸಹಿತ ಮನಮುಟ್ಟುವ ರೀತಿಯಲ್ಲಿ ವಿವರಿಸಿದರು. ಐಐಟಿ-ಜಾಮ್ ಪರೀಕ್ಷೆಯ ಸ್ವರೂಪ, ಸಿದ್ಧತೆ ನಡೆಸುವ ವಿಧಾನ, ಸಮಯ ನಿರ್ವಹಣೆ ಹಾಗೂ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಅವರು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು.

ಜೆಎಸ್ಎಸ್ ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯಾಯ ಉದ್ಘಾಟಿಸಿ ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಜೀವನದಲ್ಲಿ ಉನ್ನತ ಗುರಿಯನ್ನು ಸಾಧಿಸುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವೆಂಕಟೇಶ್ ಮುತಾಲಿಕ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತನ್ನದೇ ಆದ ಪ್ರತಿಭೆ ಮತ್ತು ಸಾಮರ್ಥ್ಯ ಇರುತ್ತದೆ. ಅದನ್ನು ಗುರುತಿಸಿ, ಬೆಳೆಸಿಕೊಂಡು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್  ಅರುಣಕುಮಾರ್ ಎಂ. ಶಿರಹಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ರಸಾಯನಶಾಸ್ತ್ರ ವಿಭಾಗಕ್ಕೆ ಕಾರ್ಯದರ್ಶಿಗಳಾದ ಡಾ. ಅಜಿತ್ ಪ್ರಸಾದ್ ಅವರು ಪ್ರಯೋಗಾಲಯಗಳನ್ನು ನವೀಕರಿಸಿ, ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಟ್ಟಿರುವುದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಐಕ್ಯೂಎಸಿ ಸಂಯೋಜಕ ಡಾ. ಶೌಕತಅಲಿ ಮೇಗಿಲ್ಮನಿ, ನಿವೃತ್ತ ಪ್ರಾಧ್ಯಾಪಕ ಡಾ. ಜಗದೀಶ್ ಬರಗಿ ಉಪಸ್ಥಿತರಿದ್ದರು. ಡಾ. ವೀಣಾ ಭಟ್ ಪರಿಚಯಿಸಿದರು. ಡಾ. ಮಹೇಶ್ ಆರ್.ಟಿ. ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 900 ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಂಡರು.


ಹಂಚಿಕೊಳ್ಳಿ

Leave a Reply

Your email address will not be published. Required fields are marked *