ಹುಬ್ಬಳ್ಳಿ
ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ಮೂರು ತಾಲ್ಲೂಕುಗಳನ್ನು ತೀವ್ರ ಬರಗಾಲ ಪಿಡಿತ ಪ್ರದೇಶ ಎಂದು ದಿನಾಂಕ: 17/09/2026 ರಂದು ರಾಜ್ಯ ಸರ್ಕಾರ ಘೋಷಿಸಿದೆ ಎಂದು ಶಾಸಕ ಎನ್.ಹೆಚ್. ಕೋನರಡ್ಡಿ ತಿಳಿಸಿದ್ದಾರೆ.
ದಿನಾಂಕ: 04/09/2026 ರಂದು ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕುಗಳನ್ನು ಮಧ್ಯಮ ಬರಗಾಲ ಎಂದು ಘೋಷಿಸಿದ್ದರು. ಮುಂದುವರೆದು ಮೂರು ತಾಲ್ಲೂಕುಗಳನ್ನು ತೀವ್ರ ಬರಗಾಲ ಪೀಡಿತ ಪ್ರದೇಶ ಎಂದು 17/09/2026 ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅವರು ಘೋಷಿಸಿದ್ದಕ್ಕೆ ಸರ್ಕಾರಕ್ಕೆ ರೈತರ ಪರವಾಗಿ ಅಭಿನಂದಿಸುತ್ತಾ ಇದರ ಜೊತೆ ಜಿಲ್ಲೆಯಲ್ಲಿರುವ ಎಲ್ಲ ತಾಲ್ಲೂಕುಗಳು ಬರಪೀಡಿತ ಪ್ರದೇಶಗಳು ಎಂದು ಘೋಷಿಸಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯಕ್ಕೆ ಬರಗಾಲ ಪೀಡಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಅಧ್ಯಯನ ತಂಡ ಬಂದು ಹೋದ ನಂತರ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಲು ಪ್ರಯತ್ನಿಸುತ್ತೇನೆ ಎಂದು ಕೋನರಡ್ಡಿ ಹೇಳಿದ್ದಾರೆ.
