ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆ: ಬಿಜೆಪಿ ಅಭ್ಯರ್ಥಿ ಸಂಕನೂರ 2ನೇ ಸುತ್ತಿನಲ್ಲೂ ಮುನ್ನಡೆ
ಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ-2026ರ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಎರಡನೇ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದು, ಎರಡನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ 6,161 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರು 4,697 ಮತಗಳನ್ನು ಪಡೆದಿದ್ದಾರೆ. ಈ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ 1,464 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನ ಮತ ಎಣಿಕೆಯನ್ನು ಒಟ್ಟುಗೂಡಿಸಿದರೂ ಕೂಡಾ…
