ಜೆಎಸ್‌ಎಸ್‌ನಲ್ಲಿ ಕ್ಯಾಂಪಸ್ ಟು ಕಾರ್ಪೊರೇಟ್ ಕಾರ್ಯಾಗಾರ

ಹಂಚಿಕೊಳ್ಳಿ

ಧಾರವಾಡ
ನಗರದ ಪ್ರತಿಷ್ಠಿತ ಜನತಾ ಶಿಕ್ಷಣ ಸಮಿತಿಯ ಕೆ.ಎಚ್. ಕಬ್ಬೂರ್ ತಾಂತ್ರಿಕ ಶಿಕ್ಷಣ ಸಂಸ್ಥೆಯ ಕಾಲೇಜು, ತರಬೇತಿ ಮತ್ತು ಉದ್ಯೋಗ ನೇಮಕಾತಿ ಘಟಕದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ “ಕ್ಯಾಂಪಸ್ ಟು ಕಾರ್ಪೊರೇಟ್” ಎಂಬ ವಿಷಯದ ಮೇಲೆ ಒಂದು ದಿನದ ಉಚಿತ ಕಾರ್ಯಾಗಾರ ಯಶಸ್ವಿಯಾಗಿ ಜರುಗಿತು.

ಮುಖ್ಯ ಅತಿಥಿಗಳಾಗಿ ಮೈಂಡ್‌ಸೆಟ್ ಕೋಚ್ ಮಹೇಶ್ ಮಾಸಾಳ ಅವರು, ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ, ಆತ್ಮವಿಶ್ವಾಸ, ನಾಯಕತ್ವ ಗುಣಗಳು, ತಂಡದ ಕಾರ್ಯನಿರ್ವಹಣೆ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವ ಕುರಿತು ಮಾರ್ಗದರ್ಶನ ನೀಡಿದರು.

ಜನತಾ ಶಿಕ್ಷಣ ಸಮಿತಿಯ ಆಡಳಿತಾಧಿಕಾರಿ ಅರಿಯಂತ ಪ್ರಸಾದ ಮಾತನಾಡಿ, ವಿದ್ಯಾರ್ಥಿಗಳಿಗೆ ಭವಿಷ್ಯದ ವೃತ್ತಿ ಜೀವನಕ್ಕೆ ಅಗತ್ಯವಾದ ಜ್ಞಾನ, ಕೌಶಲ್ಯ ಹಾಗೂ ಸಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಲು ಹೇಳಿದರು. ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಚಾರ್ಯೆ ವೇದವತಿ ತಿವಾರಿ ಅವರು, ವಿದ್ಯಾರ್ಥಿಗಳಿಗೆ ಯಾವ ರೀತಿ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬಹುದು ಎಂಬುದರ ಕುರಿತು ಮಾರ್ಗದರ್ಶನ ನೀಡಿದರು. ತರಬೇತಿ ಮತ್ತು ಉದ್ಯೋಗ ನೇಮಕಾತಿ ಅಧಿಕಾರಿ ಗಣಪತಿ ಜಗದ ಹಾಗೂ ಜಯಶ್ರೀ ಬಂಕದಮನಿ, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಜ್ಯೋತಿ ಕಟ್ಟಗಿ ಉಪಸ್ಥಿತರಿದ್ದರು.

ಚೆನ್ನಮ್ಮ ಪಾಟೀಲ್ ನಿರೂಪಿಸಿದರು. ಈ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಕಾಲೇಜಿನ ಶಿಕ್ಷಣದಿಂದ ಕಾರ್ಪೊರೇಟ್ ಉದ್ಯೋಗ ಕ್ಷೇತ್ರಕ್ಕೆ ಪ್ರವೇಶಿಸುವಾಗ ಅಗತ್ಯವಿರುವ ಕೌಶಲ್ಯಗಳು ಮತ್ತು ಉದ್ಯಮಗಳ ನಿರೀಕ್ಷೆಗಳ ಕುರಿತು ಅರಿವು ಮೂಡಿಸಿತು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ವೃತ್ತಿ ಜೀವನಕ್ಕೆ ಅಗತ್ಯವಾದ ಜ್ಞಾನ, ಕೌಶಲ್ಯ ಹಾಗೂ ಸಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಲು ಸಹಕಾರಿಯಾಯಿತು.


ಹಂಚಿಕೊಳ್ಳಿ

Leave a Reply

Your email address will not be published. Required fields are marked *