ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಲಿ: ಡಾ. ಅಜಿತ ಪ್ರಸಾದ
ಹಂಚಿಕೊಳ್ಳಿಧಾರವಾಡವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯೇ ಶಿಕ್ಷಣ ಸಂಸ್ಥೆಗಳ ಮುಖ್ಯ ಧ್ಯೇಯವಾಗಬೇಕು. ಪಠ್ಯ ಶಿಕ್ಷಣದ ಜೊತೆಗೆ ಆಧುನಿಕ ತಂತ್ರಜ್ಞಾನ ಹಾಗೂ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಸಾಧ್ಯ ಎಂದು ಜೆ.ಎಸ್.ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಹೇಳಿದರು. ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಎಂ.ಸಿ.ಎ. ಸಂಸ್ಥೆಗೆ ೨೦೨೬–೨೭ನೇ ಸಾಲಿಗೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ದೀಕ್ಷಾ ಬೋಧ ಸಮಾರಂಭ ಹಾಗೂ ಎರಡು ದಿನಗಳ ಓರಿಯೆಂಟೇಶನ್ ಕಾರ್ಯಕ್ರಮದ ಉದ್ಘಾಟನೆ ಮತ್ತು ತರಬೇತಿ ಪೂರ್ಣಗೊಳಿಸಿದ ದ್ವಿತೀಯ ವರ್ಷದ…
