6ರಂದು ಮನೋಚೇತನ ಭಾವನಮನ
ಹಂಚಿಕೊಳ್ಳಿಧಾರವಾಡಇತ್ತೀಚೆಗೆ ನಿಧನರಾದ ಖ್ಯಾತ ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ ಅವರಿಗೆ ನುಡಿನಮನ ಸಲ್ಲಿಸುವ ನಿಟ್ಟಿನಲ್ಲಿ ಅ. 6ರಂದು ಸಂಜೆ 5.30ಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಮನೋಚೇತನ ಭಾವನಮನ ಕಾರ್ಯಕ್ರಮ ಆಯೋಜಿಸಲಾಗಿದೆ. ಡಂಬಳ-ಗದಗದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ, ಬೈರನಟ್ಟಿಯ ಶಾಂತಲಿಂಗ ಸ್ವಾಮೀಜಿ, ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ರಾಮಕೃಷ್ಣ ಆಶ್ರಮದ ವಿಜಯಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಶಿ, ಆರ್‌ಎಸ್ಸೆಸ್ ಅಖಿಲ ಭಾರತ ವ್ಯವಸ್ಥಾ ಪ್ರಮುಖ…
