ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ
ಹಂಚಿಕೊಳ್ಳಿಮೊದಲ ದಿನವೇ ವಿಶೇಷ ಅಲಂಕಾರ, ದರ್ಶನಕ್ಕೆ ಹರಿದು ಬಂದ ಭಕ್ತಸಾಗರ ಧಾರವಾಡನಾಡಿನಾದ್ಯಂತ ನವರಾತ್ರಿ ಉತ್ಸವದ ಸಂಭ್ರಮ ಮನೆಮಾಡಿದ್ದು, ಧಾರವಾಡದ ದುರ್ಗಾದೇವಿ ದೇವಸ್ಥಾನದಲ್ಲಿಯೂ ಶರನ್ನವರಾತ್ರಿಯ ಮೊದಲ ದಿನ ಭಕ್ತಿಭಾವದಿಂದ ಆಚರಿಸಲಾಯಿತು. ದೇವಿಗೆ ಮೊದಲ ದಿನ ಗೆಜ್ಜೆ ವಿಶೇಷ ಅಲಂಕಾರ ಮಾಡಲಾಗಿದ್ದು, ದೇವಿಯ ದರ್ಶನ ಪಡೆಯಲು ಬೆಳಗ್ಗಿನಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದರು. ನವರಾತ್ರಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಿಯ ಅಲಂಕಾರ ಭಕ್ತರ ಗಮನ ಸೆಳೆಯಿತು. ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ದುರ್ಗಾದೇವಿಯ ದರ್ಶನ ಪಡೆದು,…
