ಕರಿಯಮ್ಮ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಉತ್ಸವ
ಹಂಚಿಕೊಳ್ಳಿಧಾರವಾಡನಗರದ ಕೆಲಗೇರಿ ರಸ್ತೆಯ ಶಾಂತಿ ನಿಕೇತನ ನಗರದಲ್ಲಿರುವ ಶ್ರೀ ಕರಿಯಮ್ಮ ದೇವಸ್ಥಾನದಲ್ಲಿ ಬರುವ ರವಿವಾರ ಅಕ್ಟೋಬರ್ ೧೧ ರಿಂದ ಒಂಬತ್ತು ದಿನಗಳ ಕಾಲ ನವರಾತ್ರಿ ಉತ್ಸವವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಶಾಂತಿ ನಿಕೇತನ ನಗರದಲ್ಲಿ ನೆಲೆಗೊಂಡಿರುವ ಶ್ರೀ ಕರಿಯಮ್ಮ ದೇವಿಯನ್ನು ಶ್ರೀ ಮಹಾಕಾಳಿ, ಶ್ರೀ ಮಹಾಲಕ್ಷ್ಮಿ ಮತ್ತು ಮಹಾಸರಸ್ವತಿ ತ್ರಿಗುಣಾತ್ಮಕ ಸ್ವರೂಪಳೆಂದು ಹೇಳಲಾಗುತ್ತಿದೆ. ದೇವಿಯು ನಂಬಿದ ಭಕ್ತರು ಮತ್ತು ರೈತರಿಗೆ ಆದಿಶಕ್ತಿಯಾಗಿದ್ದಾಳೆ. ನವರಾತ್ರಿ ಉತ್ಸವದ ಅಂಗವಾಗಿ ಒಂಬತ್ತು ದಿನಗಳ ಕಾಲ ದೇವಿಗೆ ವಿವಿಧ ಅಲಂಕಾರ ಮಾಡಲಾಗುತ್ತಿದೆ….
