ಮತ್ತೆ ಸಾಕ್ಷಿಯಾಯಿತು ಧಾರವಾಡದ ಹಿಂದೂ–ಮುಸ್ಲಿಂ ಭಾವೈಕ್ಯತೆ

ಹಂಚಿಕೊಳ್ಳಿ

ಮಾಳಾಪುರ ಮಸೀದಿ ಬಳಿ ಗಣೇಶಮೂರ್ತಿಗೆ ಮುಸ್ಲಿಂ ಸಮುದಾಯದಿಂದ ಪುಷ್ಪಮಾಲೆ ಅರ್ಪಣೆ

ಧಾರವಾಡ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಗಣೇಶ ಮೆರವಣಿಗೆ ವೇಳೆ ಧಾರವಾಡದ ಹಿಂದೂ–ಮುಸ್ಲಿಂ ಭಾವೈಕ್ಯತೆ ಮತ್ತೊಮ್ಮೆ ಅನಾವರಣಗೊಂಡಿತು.

ನಗರದ ಮಾಲಾಪುರ ಮಸೀದಿ ಮುಂಭಾಗದಲ್ಲಿ ಗಣೇಶಮೂರ್ತಿಯ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರು ಗಣೇಶಮೂರ್ತಿಗೆ ಪುಷ್ಪಮಾಲೆ ಹಾಕಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಪರಸ್ಪರ ಸೌಹಾರ್ದತೆ ಹಾಗೂ ಸಹೋದರತ್ವದ ಭಾವನೆ ವ್ಯಕ್ತವಾಯಿತು.

ಎಸಿಪಿ ಧಾರವಾಡ ಹಾಗೂ ಉಪನಗರ ಪೊಲೀಸ್ ಠಾಣೆಯ ಸಿಪಿಐ ಅವರ ನೇತೃತ್ವದಲ್ಲಿ ಗಣೇಶ ಮೆರವಣಿಗೆ ವಿಜೃಂಭಣೆಯಿಂದ ಸಾಗಿತು. ಮೆರವಣಿಗೆಯುದ್ದಕ್ಕೂ ಭಕ್ತರು ಸಂಭ್ರಮದಿಂದ ಪಾಲ್ಗೊಂಡಿದ್ದು, ನಗರದ ವಿವಿಧೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತ್ತು. ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಮೆರವಣಿಗೆಯ ಮೇಲೆ ನಿಗಾ ವಹಿಸಲಾಗಿತ್ತು.


ಹಂಚಿಕೊಳ್ಳಿ

Leave a Reply

Your email address will not be published. Required fields are marked *