ಮೂವರು ವಿದ್ಯಾರ್ಥಿಗಳಿಗೆ ಪದಕ; ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ
ಧಾರವಾಡ
ಮಹಾರಾಷ್ಟ್ರದ ಲೋನಾವಾಲಾದ ಸಿಂಹಗಡ್ ಪಬ್ಲಿಕ್ ಶಾಲೆಯಲ್ಲಿ ಸೆ. 26ರಿಂದ ಅ. 3ರವರೆಗೆ ನಡೆದ ಸಿಬಿಎಸ್‌ಇ ದಕ್ಷಿಣ ವಲಯ ಕ್ರಿಕೆಟ್ ಚಾಂಪಿಯನ್‌ಶಿಪ್-2026ರಲ್ಲಿ ಧಾರವಾಡದ ವಿದ್ಯಾಗಿರಿಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
17 ವರ್ಷದೊಳಗಿನ ಬಾಲಕರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುಮಾರ ಸುಜಲ್ ಪಾಟೀಲ್ ಚಿನ್ನದ ಪದಕ ಗಳಿಸಿದ್ದಾರೆ. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಕುಮಾರ ಧ್ರುವ ಪಾಟೀಲ್ ಬೆಳ್ಳಿ ಪದಕ ಹಾಗೂ ಕುಮಾರ ಆಯುಷ್ಮಾನ್ ಪಿ. ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಈ ಮೂವರು ವಿದ್ಯಾರ್ಥಿಗಳು ತಮ್ಮ ಅಮೋಘ ಪ್ರದರ್ಶನದ ಮೂಲಕ ರಾಷ್ಟ್ರಮಟ್ಟದ ಕ್ರಿಕೆಟ್ ಸ್ಪರ್ಧೆಗೆ ಆಯ್ಕೆಯಾಗಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಜೆಎಸ್‌ಎಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಜೆಎಸ್‌ಎಸ್ ಐಟಿಐ ಕಾಲೇಜಿನ ಪ್ರಾಂಶುಪಾಲ ಮಹಾವೀರ ಉಪಾಧ್ಯೆ, ಜೆಎಸ್‌ಎಸ್ ಎಂಸಿಎ ಕಾಲೇಜಿನ ನಿರ್ದೇಶಕ ಡಾ. ಸೂರಜ್ ಜೈನ್ ಹಾಗೂ ಶಾಲೆಯ ಪ್ರಾಂಶುಪಾಲೆ ರಜನಿ ಪಾಟೀಲ್ ಅಭಿನಂದಿಸಿ, ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು
