ಧಾರವಾಡ
ಇತ್ತೀಚೆಗೆ ನಿಧನರಾದ ಖ್ಯಾತ ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ ಅವರಿಗೆ ನುಡಿನಮನ ಸಲ್ಲಿಸುವ ನಿಟ್ಟಿನಲ್ಲಿ ಅ. 6ರಂದು ಸಂಜೆ 5.30ಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಮನೋಚೇತನ ಭಾವನಮನ ಕಾರ್ಯಕ್ರಮ ಆಯೋಜಿಸಲಾಗಿದೆ.
ಡಂಬಳ-ಗದಗದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ, ಬೈರನಟ್ಟಿಯ ಶಾಂತಲಿಂಗ ಸ್ವಾಮೀಜಿ, ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ರಾಮಕೃಷ್ಣ ಆಶ್ರಮದ ವಿಜಯಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಶಿ, ಆರ್‌ಎಸ್ಸೆಸ್ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ವೀರಣ್ಣ ಮತ್ತಿಕಟ್ಟಿ, ಮಾಜಿ ಸಚಿವ ಎಚ್.ಕೆ. ಪಾಟೀಲ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಭಾರತೀಯ ವೈದ್ಯಕೀಯ ಸಂಸ್ಥೆಯ ಧಾರವಾಡ ಘಟಕದ ಅಧ್ಯಕ್ಷ ಡಾ. ಜಗದೀಶ ನಿರಡಿ ಹಾಗೂ ಚಿತ್ರನಟ ಶ್ರೀನಗರ ಕಿಟ್ಟಿ ಭಾಗವಹಿಸಲಿದ್ದಾರೆ. ಪಾಂಡುರಂಗಿ ಕುಟುಂಬದ ಸದಸ್ಯರು ಉಪಸ್ಥಿತರಿರುವರು ಎಂದು ಡಾ. ಆನಂದ ಪಾಂಡುರಂಗಿ ಅಭಿಮಾನಿ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.
