ಆನ್‌ಲೈನ್ ಅರ್ಜಿ ಆಹ್ವಾನ ಮಿಸ್ ಮಾಡ್ದೆ ನೋಡಿ

ಹಂಚಿಕೊಳ್ಳಿ

ವೀರಶೈವ-ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳು, ರೈತರು ಹಾಗೂ ನಿರುದ್ಯೋಗಿ ಯುವಜನರಿಗೆ ವಿವಿಧ ಸೌಲಭ್ಯ

ಬೆಂಗಳೂರು
ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೀರಶೈವ-ಲಿಂಗಾಯತ ಸಮುದಾಯದ (ಪ್ರವರ್ಗ-3ಬಿ) ಅರ್ಹ ವಿದ್ಯಾರ್ಥಿಗಳಿಗೆ ಬಸವ ಬೆಳಗು ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿದ್ಯಾವಿಕಾಸ ಯೋಜನೆ, ರೈತರಿಗೆ ಅಮೃತ ನೀರಾವರಿ ಯೋಜನೆ, ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಸೇರಿದಂತೆ ಹಲವು ಯೋಜನೆಗಳನ್ನು ನಿಗಮ ಜಾರಿಗೊಳಿಸುತ್ತಿದೆ.

ಬಸವ ಬೆಳಗು ಯೋಜನೆಯಡಿ ಕುಟುಂಬದ ವಾರ್ಷಿಕ ಆದಾಯ ₹3.50 ಲಕ್ಷದೊಳಗಿನ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ವ್ಯಾಸಂಗಕ್ಕಾಗಿ ವಾರ್ಷಿಕ ₹1 ಲಕ್ಷದವರೆಗೆ, ಕೋರ್ಸ್ ಅವಧಿಗೆ ಗರಿಷ್ಠ ₹4ರಿಂದ ₹5 ಲಕ್ಷದವರೆಗೆ ಶೇ.2ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸಲಾಗುತ್ತದೆ. CET/NEET ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರಿ ಕೋಟಾದಲ್ಲಿ ಸೀಟು ಪಡೆದಿರುವುದು ಅಗತ್ಯವಾಗಿದೆ.

ವಿದೇಶ ವಿದ್ಯಾವಿಕಾಸ ಯೋಜನೆಯಡಿ ಕುಟುಂಬದ ವಾರ್ಷಿಕ ಆದಾಯ ₹15 ಲಕ್ಷದೊಳಗಿನ ವಿದ್ಯಾರ್ಥಿಗಳಿಗೆ QS World Ranking 1000ರೊಳಗಿನ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಗರಿಷ್ಠ ₹50 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ.

ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೊಳವೆಬಾವಿ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವ ಅಮೃತ ನೀರಾವರಿ ಯೋಜನೆಯನ್ನೂ ಜಾರಿಗೊಳಿಸಲಾಗಿದೆ. ಅರ್ಹ ರೈತರು Farmer’s FRUIT ID ಹಾಗೂ ಸಣ್ಣ ಹಿಡುವಳಿದಾರರ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ನಿರುದ್ಯೋಗಿ ಯುವಜನರು ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಮತ್ತು ಸಹಾಯಧನ ಸೌಲಭ್ಯ, ನಾಲ್ಕು ಚಕ್ರ ವಾಹನ ಖರೀದಿಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ಶೇ.50ರಷ್ಟು ಅಥವಾ ಗರಿಷ್ಠ ₹3 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ. 21ರಿಂದ 45 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು.

ಅರ್ಹ ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರ ಆಧಾರ್‌ಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗಿರಬೇಕು. ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಮೇಲ್ಕಂಡ ಯೋಜನೆಗಳಲ್ಲಿ ಒಂದರಡಿ ಸೌಲಭ್ಯ ಪಡೆಯಲು ಅವಕಾಶವಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-09-2026.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಜಾಲತಾಣ ಅಥವಾ 080-22865522, 9900012351, 9900012352 ಸಂಪರ್ಕಿಸಬಹುದು.


ಹಂಚಿಕೊಳ್ಳಿ

Leave a Reply

Your email address will not be published. Required fields are marked *