ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರದ ಕಾವು!
ಉರಿ ಬಿಸಿಲನ್ನೂ ಲೆಕ್ಕಿಸದೆ ಮತದಾರರ ಮನಗೆಲ್ಲಲು ಸಂಕನೂರ–ಲಿಂಬಿಕಾಯಿ ಕಸರತ್ತು • ಶ್ರೀಕಾಂತ ಬೆಟಗೇರಿಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ ಅಭ್ಯರ್ಥಿ ಪ್ರೊ. ಎಸ್.ವಿ. ಸಂಕನೂರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದು, ಕ್ಷೇತ್ರದಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೇ ಬರುವ ಅಕ್ಟೋಬರ್ 23ರಂದು ನಡೆಯಲಿರುವ ಮತದಾನದ ಹಿನ್ನೆಲೆಯಲ್ಲಿ ಉರಿ ಬಿಸಿಲನ್ನೂ ಲೆಕ್ಕಿಸದೆ ಇಬ್ಬರೂ ಅಭ್ಯರ್ಥಿಗಳು ನಾಲ್ಕು ಜಿಲ್ಲೆಯಾದ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಮತದಾರರ…
