೨೦೨೯ರ ವಿಶ್ವ ಸೀನಿಯರ್ ವೇಟ್ ಲಿಫ್ಟಿಂಗ್ ಚಾಂಪಿಯನ್ಷಿಪ್ಸ್ಗೆ ಭಾರತದ ಆತಿಥ್ಯ, ಭಾರತದ ಕ್ರೀಡಾ ಇತಿಹಾಸದಲ್ಲಿ ಐತಿಹಾಸಿಕ ಕ್ಷಣ !!
ಅಹಮದಾಬಾದ೨೦೨೯ರ ವಿಶ್ವ ಸೀನಿಯರ್ ವೇಟ್ ಲಿಫ್ಟಿಂಗ್ ಚಾಂಪಿಯನ್ಷಿಪ್ಸ್ಗೆ ಅಹಮದಾಬಾದ್ ಆತಿಥ್ಯ ವಹಿಸಲಿದ್ದು, ಭಾರತದ ಕ್ರೀಡಾ ಇತಿಹಾಸದಲ್ಲಿ ಇದೊಂದು ಅವಿಸ್ಮರಣೀಯ ಘಟನೆಯಾಗಲಿದೆ. ಚೀನಾದ ನಿಂಗ್ಬೋದಲ್ಲಿ ನಡೆದ ಅಂತಾರಾಷ್ಟ್ರೀಯ ವೇಟ್ ಲಿಫ್ಟಿಂಗ್ ಫೆಡರೇಷನ್(ಐ.ಡಬ್ಲೂ.ಎಫ್.) ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು ಎಂದು ಭಾನುವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ. ಭಾರತ ಮೊಟ್ಟ ಮೊದಲ ಬಾರಿಗೆ ವಿಶ್ವ ಸೀನಿಯರ್ ವೇಟ್ ಲಿಫ್ಟಿಂಗ್ ಚಾಂಪಿಯನ್ಷಿಪ್ಸ್ ಸಂಘಟಿಸುತ್ತಿದ್ದು, ಇದು ಭಾರತದ ಕ್ರೀಡಾ ಇತಿಹಾಸದಲ್ಲಿ ಐತಿಹಾಸಿಕ ಕ್ಷಣವಾಗಿರಲಿದೆ. ರಷ್ಯಾ ಮತ್ತು ವೆನೆಜುವೆಲಾ ದೇಶಗಳನ್ನು ಹಿಂದಿಕ್ಕಿ ಭಾರತ…
