ಇತಿಹಾಸ ಸಂಸ್ಕೃತಿ ಶ್ರೀ ಪ್ರಶಸ್ತಿ ಪ್ರದಾನ

ಹಂಚಿಕೊಳ್ಳಿ

ಭಾಲ್ಕಿ
ಬೀದರ ಜಿಲ್ಲೆಯ ಭಾಲ್ಕಿಯಲ್ಲಿ ಶುಕ್ರವಾರ ಆರಂಭಗೊಂಡ ಕರ್ನಾಟಕ ಇತಿಹಾಸ ಅಕಾಡೆಮಿಯ 40ನೇ ವಾರ್ಷಿಕ ಸಮ್ಮೇಳನದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಡಾ. ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದ ವಿಶ್ರಾಂತ ಪ್ರಾಧ್ಯಾಪಕ ಹಾಗೂ ಶಾಸನತಜ್ಞ ಡಾ. ಜೆ.ಎಂ. ನಾಗಯ್ಯ ಮತ್ತು ಸಂಶೋಧಕಿ ಡಾ. ಸ್ನಿತಾ ಸುರೇಬಾನಕರ ಅವರಿಗೆ ಪ್ರತಿಷ್ಠಿತ ‘ಇತಿಹಾಸ ಸಂಸ್ಕೃತಿ ಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಇಬ್ಬರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಕರ್ನಾಟಕ ಇತಿಹಾಸ ಅಕಾಡೆಮಿಯ 40ನೇ ವಾರ್ಷಿಕ ಸಮ್ಮೇಳನವು ಮೂರು ದಿನಗಳ ಕಾಲ ನಡೆಯಲಿದೆ.

ಈ ಸಂದರ್ಭದಲ್ಲಿ ಭಾಲ್ಕಿ ಹಿರೇಮಠದ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ಸಮ್ಮೇಳನದ ಸರ್ವಾಧ್ಯಕ್ಷ ಡಾ. ಕೆ. ರವೀಂದ್ರನಾಥ, ಡಾ. ದೇವರ ಕೊಂಡಾರೆಡ್ಡಿ, ಡಿ.ವಿ. ಪರಮಶಿವಮೂರ್ತಿ, ಡಾ. ಎಫ್.ಟಿ. ಹಳ್ಳಿಕೇರಿ, ಪ್ರೊ. ಲಕ್ಷ್ಮಣ ತೆಲಗಾವಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


ಹಂಚಿಕೊಳ್ಳಿ

Leave a Reply

Your email address will not be published. Required fields are marked *