ಶಿಕ್ಷಣ ಸೇವೆಗೆ ಸಂದ ಗೌರವ

ಹಂಚಿಕೊಳ್ಳಿ

ಧಾರವಾಡ: ಕರ್ನಾಟಕ ಸರ್ಕಾರದ ಶಿಕ್ಷಕರ ಕಲ್ಯಾಣ ನಿಧಿಯಿಂದ ನೀಡಲಾಗುವ 2026ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸರ್ಕಾರಿ ಉರ್ದು ಪ್ರೌಢಶಾಲೆ, ಧಾರವಾಡ ಶಹರದ ಶಿಕ್ಷಕಿ ಕೆ.ಆರ್. ರಕ್ಕಸಗಿ ಅವರು ಭಾಜನರಾಗಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆ ಹಾಗೂ ಕರ್ತವ್ಯನಿಷ್ಠೆಯನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ. ಸಂಕನೂರು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ನಾರಾಯಣ ಭಜಂತ್ರಿ, ಕಾರ್ಯದರ್ಶಿ ಬಿ.ಜಿ. ಬಶೆಟ್ಟಿ, ಉಪಾಧ್ಯಕ್ಷ ಪ್ರಮೋದ್ ಹರಿಬಟ್, ಕೋಶಾಧ್ಯಕ್ಷ ಎಸ್.ಎಸ್. ರೂಗಿ, ಸಹಕಾರ್ಯದರ್ಶಿ ಎಸ್.ವಿ. ಸಂಕಣ್ಣವರ, ಸಂಘಟನಾ ಕಾರ್ಯದರ್ಶಿ ಸಿ.ಪಿ. ಪಾಟೀಲ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕ ಸಮುದಾಯದವರು ಅಭಿನಂದಿಸಿದ್ದಾರೆ.

ಶಿಕ್ಷಕಿ ಕೆ.ಆರ್. ರಕ್ಕಸಗಿ ಅವರ ಸಾಧನೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಸ್ಫೂರ್ತಿಯಾಗಿದೆ ಎಂದು ಸಂಘದ ಪದಾಧಿಕಾರಿಗಳು ಶುಭ ಹಾರೈಸಿದ್ದಾರೆ.


ಹಂಚಿಕೊಳ್ಳಿ

Leave a Reply

Your email address will not be published. Required fields are marked *