ಧಾರವಾಡ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಹಾಯಧನ ಪಾವತಿಸಲು ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್. ಆರ್
ಧಾರವಾಡ
ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಹೇಳಿದರು.
ಬುಧವಾರ ಸಂಜೆ ಜಿಲ್ಲಾಧಿಕಾರಿ ನೂತನ ಸಭಾಭವನದಲ್ಲಿ ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಹಾಯಧನ ಹಣವನ್ನು ಪಾವತಿ ಕುರಿತು ಮಾತನಾಡಿದರು.
ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ಪ್ರತಿ ಟನ್‍ಗೆ ರೂ. 50 ಹಾಗೂ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳಿಂದ ಪ್ರತಿ ಟನ್‍ಗೆ ರೂ. 50 ರಂತೆ ಸಹಾಯಧನ ಪಾವತಿಸುವ ಕುರಿತು ಚರ್ಚಿಸಲಾಗಿದೆ. ಕಬ್ಬು ಬೆಳೆಗಾರರಿಗೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ಈ ಸಹಾಯಧನವನ್ನು ನಿಗದಿತ ಅವಧಿಯಲ್ಲಿ ಪಾವತಿಸಲು ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಹಾಯಧನದ ಹಣವು ಅರ್ಹ ಕಬ್ಬು ಬೆಳೆಗಾರರಿಗೆ ಸಮಯಕ್ಕೆ ಸರಿಯಾಗಿ ತಲುಪುವಂತೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ವೇದಿಕೆಯಲ್ಲಿ ಪ್ರೊಬೇಸನರಿ ಐಎಎಸ್ ಅಧಿಕಾರಿ ಅನುಪ್ರೀಯಾ ಸಾಕ್ಯಾ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಿಗಿ ಉಪಸ್ಥಿತರಿದ್ದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರು ಮತ್ತು ರೈತ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

