ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು

ಹಂಚಿಕೊಳ್ಳಿ

ಹೊಲದ ಕೆಲಸ ಮುಗಿಸಿ ಮನೆಗೆ ಮರಳುವಾಗ ದುರ್ಘಟನೆ

ಧಾರವಾಡ: ಹೊಲದ ಕೆಲಸ ಮುಗಿಸಿಕೊಂಡು ಟ್ರ್ಯಾಕ್ಟರ್‌ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ 50 ವರ್ಷದ ಮರಿಯಪ್ಪ ಮೂಸಪ್ಪನವರ್ ಮೃತಪಟ್ಟಿರುವ ಘಟನೆ ತಾಲೂಕಿನ ಬಾಡ ಗ್ರಾಮದಲ್ಲಿ ಸೋಮವಾರ ರಾತ್ರಿ ಈಗಷ್ಟೇ ನಡೆದಿದೆ.
ಮರಿಯಪ್ಪ ಅವರು ಹೊಲದ ಕೆಲಸಕ್ಕಾಗಿ ಟ್ರ್ಯಾಕ್ಟರ್‌ನಲ್ಲಿ ತೆರಳಿದ್ದರು. ಕೆಲಸ ಮುಗಿಸಿಕೊಂಡು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮರಿಯಪ್ಪ ಅವರು ಮೃತಪಟ್ಟಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ನೆರವಿಗೆ ಮುಂದಾದರು. ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮರಿಯಪ್ಪ ಅವರ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖ ಮಡುಗಟ್ಟಿದೆ. ಇನ್ನೂ ಮೂವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಆದರೆ, ಹೆಸರು ತಿಳಿದು ಬಂದಿಲ್ಲ.


ಹಂಚಿಕೊಳ್ಳಿ

Leave a Reply

Your email address will not be published. Required fields are marked *