ಧಾರವಾಡ
ಖ್ಯಾತ ಮನೋವೈದ್ಯರು, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಾಗೂ ಬಡವರ ಬಂಧುವಾಗಿದ್ದ ಡಾ. ಆನಂದ ಪಾಂಡುರಂಗಿ ಅವರು ನಮ್ಮನ್ನು ಅಗಲಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ಸಂತಾಪ ಸೂಚಿಸಿದ್ದಾರೆ.
ಉತ್ತರ ಕರ್ನಾಟಕದ ಅನೇಕ ಜನರಿಗೆ ತಮ್ಮ ಮಾತು, ಸಲಹೆ ಹಾಗೂ ಚಿಕಿತ್ಸೆಯ ಮೂಲಕ ಮಾನಸಿಕವಾಗಿ ಕುಗ್ಗಿದ ಸಂದರ್ಭದಲ್ಲಿ ನವ ಉಲ್ಲಾಸ ಮತ್ತು ಆತ್ಮವಿಶ್ವಾಸದಿಂದ ಜೀವನ ನಡೆಸುವ ಧೈರ್ಯ ತುಂಬಿದ ಅವರು, ಸಮಾಜಮುಖಿ ಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಬಡವರು ಹಾಗೂ ಸಾಮಾನ್ಯ ಜನರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಅವರ ಸೇವೆ ಸದಾ ಸ್ಮರಣೀಯ.
ಅವರ ನಿಧನದಿಂದ ವೈದ್ಯಕೀಯ ಕ್ಷೇತ್ರಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅಗಲಿದ ಡಾ. ಆನಂದ ಪಾಂಡುರಂಗಿ ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗ, ಬಂಧು-ಬಳಗ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.
