ಕವಿವಿಯಲ್ಲಿ ವಿಕಸಿತ ಭಾರತ ಯುವ ಸಂಸತ್ತು-೨೦೨೭ ಕಾರ್ಯಕ್ರಮ
ಧಾರವಾಡ
ದೇಶದ ಸಂವಿಧಾನ ಮತ್ತು ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ವ್ಯವಸ್ಥೆ ಕುರಿತು ಇಂದಿನ ಯುವ ಜನರು ಅರಿಯುವದು ಬಹಳ ಅಗತ್ಯವಿದೆ ಎಂದು ಕವಿವಿ ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ. ವೇದಮೂರ್ತಿ ಹೇಳಿದರು.
ಕವಿವಿಯ ಸೆನಟ್ ಸಭಾಭವನದಲ್ಲಿ ಭಾರತ ಸರಕಾರದ ಮೈ ಭಾರತ ಕೇಂದ್ರ ಧಾರವಾಡ, ಕರ್ನಾಟಕ ವಿಶ್ವವಿದ್ಯಾಲಯ ಎನ್ಎಸ್ಎಸ್ ಕೋಶ ಸಹೋಗದಲ್ಲಿ ವಿಕಸಿತ ಭಾರತ ಯುವ ಸಂಸತ್ತು-೨೦೨೭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವ ಸಂಸತ್ತಿನ ಆಶಯವು ವಿದ್ಯಾರ್ಥಿಗಳಲ್ಲಿ ಚರ್ಚೆ, ಸಂವಾದ, ತಾರ್ಕಿಕ ಚಿಂತನೆ. ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ನಾಯಕತ್ವದ ಸಾಮರ್ಥ್ಯವನ್ನು ಬೆಳೆಸುವುದಾಗಿದೆ. ಇಂತಹ ವೇದಿಕೆಗಳು ವಿದ್ಯಾರ್ಥಿಗಳಿಗೆ ಸಂಸದೀಯ ಕಾರ್ಯವೈಖರಿ, ಪ್ರಜಾಪ್ರಭುತ್ವದ ಪ್ರಕ್ರಿಯೆ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ತಿಳಿದುಕೊಳ್ಳಲು ಸಹಕಾರಿಯಾಗುತ್ತವೆ. ಯುವಜನರು ತಮ್ಮ ಅಭಿಪ್ರಾಯಗಳನ್ನು ಜವಾಬ್ದಾರಿಯುತವಾಗಿ ಮಂಡಿಸುವುದರೊಂದಿಗೆ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕೆಂಬ ಸಂದೇಶವನ್ನು ಕಾರ್ಯಕ್ರಮದ ಮೂಲ ಉದ್ದೇಶ ಎಂದರು.
ಹೈಕೋರ್ಟ್ ವಕೀಲ ಶರಣು ಅಂಗಡಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಯುವಜನರು ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ, ಶಿಸ್ತು, ಸಾಮಾಜಿಕ ಬದ್ಧತೆ. ಸಂವಿಧಾನದ ಮೌಲ್ಯಗಳು ಹಾಗೂ ರಾಷ್ಟ್ರೀಯ ಏಕತೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ದೇಶದ ಪ್ರಗತಿಗೆ ಪ್ರತಿಯೊಬ್ಬ ಯುವಕ-ಯುವತಿಯ ಕೊಡುಗೆ ಅಗತ್ಯವಾಗಿದ್ದು, ಜ್ಞಾನ, ಕೌಶಲ್ಯ ಮತ್ತು ಉತ್ತಮ ಚಿಂತನೆಗಳ ಮೂಲಕ ವಿಕಸಿತ ಭಾರತದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.
ಧಾರವಾಡದ ಮೈ ಭಾರತ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿಗಳಾದ ಸಂಗ್ರಾಮ ವಿ. ಸಾವಂತ ಪ್ರಾಸ್ತಾವಿಕವಾಗಿ ಮಾತನಾಡಿ, ವಿಕಸಿತ ಭಾರತ ಯುವ ಸಂಸತ್ತು ಕಾರ್ಯಕ್ರಮವು ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಸ್ಪರ್ಧಿಗಳು ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಭಾಗಹಿಸಲಿದ್ದಾರೆ ಎಂದು ಹೇಳಿದರು.
ಕವಿವಿಯ ಎನ್ಎಸ್ಎಸ್ ಕೋಶದ ಕಾರ್ಯಕ್ರಮ ಸಂಯೋಜಕ ಪ್ರೊ. ಎಂ.ಬಿ. ದಳಪತಿ ಮಾತನಾಡಿ, ಯುವಜನರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಯುವಜನರ ಆಲೋಚನೆ, ಪ್ರತಿಭೆ, ಸೃಜನಶೀಲತೆ ಹಾಗೂ ಕ್ರಿಯಾಶೀಲತೆಯನ್ನು ರಾಷ್ಟ್ರದ ಪ್ರಗತಿಗೆ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಐಕಾನ್ ಕೌಶಿಕ್ ಪಂಡಿತ್, ಮೈ ಭಾರತ ಇಲಾಖೆ ಶಿವಾಜಿ ಎನ್. ಕಡ್ಡೆಪ್ಪನವರ, ನಿರೂಪಣೆ ಸಂತೋಷ ಭದ್ರಾಪೂರ, ವಂದನಾರ್ಪಣೆ ಬಸವರಾಜ ಗುಡ್ಡಪ್ಪನವರ ಮಾಡಿದರು.

